
ಪ್ರಯಾಗರಾಜ್ : ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ 140 ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳ ವಿರುದ್ಧ 13 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮಹಾಕುಂಭದ ಉಪಪೊಲೀಸ್ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ದೃಢಪಡಿಸಿದ್ದಾರೆ.
ಫೆಬ್ರವರಿ 26ರಂದು ಮುಂಬರುವ ಮಹಾ ಶಿವರಾತ್ರಿ ಹಬ್ಬಕ್ಕೆ ಪೊಲೀಸರು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಅವರು ತಿಳಿಸಿದರು.
“ಹಾದಿತಪ್ಪಿಸುವ ವಿಷಯವನ್ನು ಹಂಚಿಕೊಂಡ 140 ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳ ವಿರುದ್ಧ 13 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ವೈಭವ್ ಕೃಷ್ಣ ತಿಳಿಸಿದ್ದಾರೆ.
ಸುಳ್ಳು ಮಾಹಿತಿ ಹರಡಲು ಇಂತಹ ಪ್ರಯತ್ನಗಳು ನಡೆದಿದ್ದರೂ ಉತ್ಸವದಲ್ಲಿ ಭಾರಿ ಜನಸ್ತೋಮ ಕಂಡು ಬಂದಿದೆ ಎಂದು ಅವರು ಹೇಳಿದರು.

ಸಂಬಂಧಿತ ಬೆಳವಣಿಗೆಯಲ್ಲಿ, ರೈಲಿನ ಬೆಂಕಿ ಅನಾಹುತಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನು ಹರಡಿದ 34 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಪೊಲೀಸರು ಈ ಹಿಂದೆ ಕ್ರಮ ಕೈಗೊಂಡಿದ್ದರು. ಫೆಬ್ರವರಿ 14 ರಂದು ಮಹಾಕುಂಭಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಸಂಭವಿಸಿದ ಬೆಂಕಿಯಲ್ಲಿ 300 ಜನರು ಸಾವಿಗೀಡಾಗಿದ್ದಾರೆ ಎಂದು ವೀಡಿಯೊ ಸುಳ್ಳು ವರದಿ ಮಾಡಿತ್ತು. ಅದು 2022 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಘಟನೆಯ ದೃಶ್ಯಾವಳಿಗಳಾಗಿದ್ದು, ಢಾಕಾ-ಸಿಲ್ಹೆಟ್ ರೈಲು ಮಾರ್ಗದಲ್ಲಿ ಪರ್ಬತ್ ಎಕ್ಸ್‌ಪ್ರೆಸ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತವಾಗಿದೆ ಎಂದು ಪೊಲೀಸ್ ತನಿಖೆಗಳು ಬಹಿರಂಗಪಡಿಸಿದವು.
“ಶಿವರಾತ್ರಿ ಹಬ್ಬಕ್ಕೆ ಸಂಪೂರ್ಣ ವ್ಯವಸ್ಥೆ ಮಾಡಲಾಗಿದೆ… ಮಹಾಕುಂಭ ಪ್ರದೇಶದಲ್ಲಿ ಎಲ್ಲಿಯೂ ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಲಾಗುವುದು. ಎಲ್ಲಾ ವ್ಯವಸ್ಥೆಗಳು ಸುಗಮವಾಗಿ ನಡೆಯಬೇಕು.. ಎಷ್ಟೇ ಜನಸಂದಣಿ ಇದ್ದರೂ ನಾವು ಅದಕ್ಕೆ ಸಂಪೂರ್ಣ ಸಿದ್ಧರಾಗಿದ್ದೇವೆ” ಎಂದು ಅವರು ಹೇಳಿದರು.
ಭಾನುವಾರ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ಭಾನುವಾರದ ವೇಳೆಗೆ ಸುಮಾರು 87.73 ಲಕ್ಷ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರದ ಮಾಹಿತಿ ಇಲಾಖೆ ವರದಿ ಮಾಡಿದೆ.
ಪ್ರಯಾಗರಾಜನಲ್ಲಿ ನಡೆದ ಮಹಾಕುಂಭಮೇಳಕ್ಕೆ 62 ಕೋಟಿ ಭಕ್ತರು ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಮಹಾಶಿವರಾತ್ರಿ ಉತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಅಂತಿಮ ಪ್ರಮುಖ ಸ್ನಾನವು ಮಹಾ ಶಿವರಾತ್ರಿ( ಫೆಬ್ರವರಿ 26) ಯಂದು ನಡೆಯುತ್ತದೆ.


ನಿಮ್ಮ ಕಾಮೆಂಟ್ ಬರೆಯಿರಿ