ಕವಲಂದೆ ‘ಮಿನಿ ಪಾಕಿಸ್ತಾನ’ ಘೋಷಣೆ: ಇಬ್ಬರನ್ನುವಶಕ್ಕೆ ಪಡೆದ ಪೊಲೀಸರು

ಮೈಸೂರು: ಕವಲಂದೆ ಮಿನಿ ಪಾಕಿಸ್ತಾನ ಎಂದು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಹನಾನ್‌ ಖಾನ್ ಮತ್ತು ನಯಾಜ್ ಶರೀಫ್ ಎಂಬವರನ್ನು ವಶಕ್ಕೆ ಪಡೆದು ಕವಲಂದೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ನಂಜನಗೂಡು ರಸ್ತೆ ದೊಡ್ಡಕವಲಂದೆಯಲ್ಲಿ ರಂಜಾನ್ ಹಬ್ಬದಂದು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹೋಗುತ್ತಿದ್ದಾಗ ಇವರಿಬ್ಬರು ಕವಲಂದೆ ಚೋಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ್ದರು. ಆ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದರು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅಂದು ಚಿತ್ರೀಕರಿಸಲಾಗಿರುವ ವಿಡಿಯೋದಲ್ಲಿನ ಚಿತ್ರಣಗಳನ್ನು ವೀಕ್ಷಿಸಿ ಕಳೆದೆರಡು ದಿನಗಳಿಂದ ಈ ಇಬ್ಬರನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಈಗ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಅಂದು ಚಿತ್ರೀಕರಿಸಲಾಗಿರುವ ಬೇರೆ ಬೇರೆ ವಿಡಿಯೋಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.ಘೋಷಣೆ ಕೂಗಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement