ಚಂಡಮಾರುತದ ಪ್ರಭಾವ : ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯ ಸೃಷ್ಟಿಯಾಗಿರುವ ಚಂಡಮಾರುತ ‘ಹಮೂನ್’ ತೀವ್ರಗೊಂಡಿದೆ. ಪರಿಣಾಮವಾಗಿ ಕರ್ನಾಟಕದಲ್ಲಿ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಿಂದ ಮಳೆಯಾಗಲಿದೆ. ರಾಜ್ಯ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹಳದಿ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ʼಹಮೂನ್‌ʼ ಚಂಡಮಾರುತ ದೇಶದ ಅನೇಕ ರಾಜ್ಯದಲ್ಲಿ ತನ್ನ ಪ್ರಭಾವ ಉಂಟು ಮಾಡಲಿದೆ.
ಅಕ್ಟೋಬರ್ 29ರಿಂದ ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಎರಡು ದಿನ ಗುಡಗು ಸಹಿತ ಭಾರೀ ಮಳೆ ಅಬ್ಬರಿಸಲಿದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಅಕ್ಟೋಬರ್ 30 ಹಾಗೂ 31ರಂದು ಹಳದಿ ಎಚ್ಚರಿಕೆ ನೀಡಲಾಗಿದೆ.
ಅಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಶಿವಮೊಗ್ಗ, ವಿಜಯನಗರ, ಚಾಮರಾಜನಗರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಜೋರಾಗಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಇವೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement