ಪಂಜಾಬ್ ಸಿಎಂ ಚನ್ನಿ ಸೋಲಿಸಿದ್ದು ಮೊಬೈಲ್ ದುರಸ್ತಿ ಅಂಗಡಿ ಕೆಲಸಗಾರ…!

ಚಂಡೀಗಢ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪ್ರಚಂಡ ಜಯಭೇರಿ ಬಾರಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಮುಖ್ಯಮಂತ್ರಿ ಚರಣ್ಜಿತ್‌ ಸಿಂಗ್‌ ಚನ್ನಿ ಸೇರಿದಂತೆ ಕಾಂಗ್ರೆಸ್ಸಿನ ಘಟನಾಘಟಿ ನಾಯಕರು ಸೋಲನುಭವಿಸಿದ್ದಾರೆ
ಪಂಜಾಬ್ ನ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸೋಲಿಸಿದ್ದು ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ…! ಮೊಬೈಲ್‌ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಲಾಭ್ ಸಿಂಗ್ ಅವರು ಮುಖ್ಯಮಂತ್ರಿ ಚನ್ನಿ ಅವರನ್ನು ಬರೋಬ್ಬರಿ 40,000 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಲಾಭ್ ಸಿಂಗ್ ಉಗೋಕೆ ಅವರ ತಾಯಿ ಸರ್ಕಾರಿ ಶಾಲೆಯಲ್ಲಿ ಸಫಾಯಿ ಕರ್ಮಾಚಾರಿಯಾಗಿ ಕೆಲಸ ಮಾಡುತ್ತಿದ್ದಾರೆ.ಲಾಭ್‌ ಸಿಂಗ್‌ ಅವರು ಪಂಜಾಬಿನ ಬರ್ನಾಲಾ ಜಿಲ್ಲೆಯ ಉಗೋಕೆ ಗ್ರಾಮದ ಹಳ್ಳಿಯ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಾರೆ. ಗುರುವಾರ, ಚುನಾವಣಾ ಫಲಿತಾಂಶ ಬಂದಾಗ ಈ ಪಂಜಾಬ್ ಚುನಾವಣೆಯ ಎಎಪಿ ದೈತ್ಯರನ್ನು ಹೆಡೆಮುರಿ ಕಟ್ಟಿದವರಲ್ಲಿ ಒಬ್ಬರು.
ಇವರ ತಂದೆ ಕೂಲಿ ಕಾರ್ಮಿಕ. ಸಾಮಾನ್ಯ ವ್ಯಕ್ತಿ ಲಾಭ್ ಸಿಂಗ್ ಚರಣ್ ಜಿತ್ ಚನ್ನಿಯನ್ನು ಸೋಲಿಸಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ...?

ಒಬ್ಬ ಜನಸಾಮಾನ್ಯ ವ್ಯಕ್ತಿ ಹೇಗೆ ಬದಲಾವಣೆ ತರಬಹುದು ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೌರ್ ಮತ್ತು ಲಾಭ್ ಸಿಂಗ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅದೇ ರೀತಿ ಕಾಂಗ್ರೆಸ್ ಸ್ಟಾರ್ ಪ್ರಚಾರಕ ನವಜ್ಯೋತ್ ಸಿಂಗ್ ಸಿಧುವನ್ನು ಸೋಲಿಸಿದ್ದು ಸಾಮಾನ್ಯ ಸ್ವಯಂಸೇವಕಿಯಾಗಿರುವ ಜೀವನ್ ಜ್ಯೋತ್ ಕೌರ್ ಎಂಬ ಮಹಿಳೆ. ಇದು ಜನಸಾಮಾನ್ಯರ ತಾಕತ್ತು. ಅದಕ್ಕಾಗಿ ನಾನು ದೇಶದ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ, ನಿಮ್ಮ ಶಕ್ತಿಯನ್ನು ತಿಳಿದುಕೊಳ್ಳಿ, ಈಗಾಗಲೇ 75 ವರ್ಷಗಳು ಕಳೆದು ಹೋಗಿದೆ.. ಇನ್ನು ಮುಂದೆ ಸಮಯ ವ್ಯರ್ಥ ಮಾಡದಿರಿ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement