
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಜಯಮಾಲಾ (Actress Jayamala) ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಫಿಲ್ಮ್ ಚೇಂಬರ್ ಚುನಾವಣೆಯಲ್ಲಿ ನಿರ್ಮಾಪಕ ಭಾಮಾ ಹರೀಶ ವಿರುದ್ಧ ನಟಿ ಜಯಮಾಲಾ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಹಾಗೂ ಭಾಮಾ ಹರೀಶ ಅವರ ನಡುವೆ ತೀವ್ರ ಸ್ಪರ್ಧೆ ಇತ್ತು. ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಈ ಬಾರಿ ಚಲಾವಣೆ ಆಗಿದ್ದು, ಅವುಗಳಲ್ಲಿ ಜಯಮಾಲಾ 512 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಜಯಮಾಲಾ ಅವರು ಎರಡನೇ ಬಾರಿ ಫಿಲಂ ಚೇಂಬರ್‌ನ ಅಧ್ಯಕ್ಷೆ ಆಗಿ ಆಯ್ಕೆಯಾಗಿದ್ದಾರೆ. 2008ರಲ್ಲಿಯೂ ಅವರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಇನ್ನುಳಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಗೌರವ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ ರಾಜು (ನಿರ್ಮಾಪಕರು), ಕಿಶೋರ (ಎಕ್ಸಿಬ್ಯೂಟರ್) ಹಾಗೂ ಕೆ.ಮಂಜು (ಡಿಸ್ಟ್ರಿಬ್ಯೂಟರ್) ಗೆಲುವು ಸಾಧಿಸಿದ್ದಾರೆ. ಅದೇ ರೀತಿ ಕಾರ್ಯದರ್ಶಿ ಸ್ಥಾನಗಳಿಗೆ ಎ. ಗಣೇಶ (ನಿರ್ಮಾಪಕ), ರಮೇಶ (ಡಿಸ್ಟ್ರಿಬ್ಯೂಟರ್), ಅಶೋಕ (ಎಕ್ಸಿಬ್ಯೂಟರ್) ಚುನಾಯಿತರಾಗಿದ್ದಾರೆ. ಖಜಾಂಚಿ ಸ್ಥಾನಕ್ಕೆ ಜಯಸಿಂಹ ಮುಸುರಿ ಆಯ್ಕೆ ಆಗಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ