ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಭಾರೀ ಆಘಾತ: ಗುಲಾಂ ನಬಿ ಆಜಾದ್‌ ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ 51 ನಾಯಕರು

ಜಮ್ಮು: ಉನ್ನತ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಆಗಾತ ಎದುರಿಸುತ್ತಿದ್ದು, 51 ನಾಯಕರು ರಾಜೀನಾಮೆ ನೀಡಿದ್ದು, ಆಜಾದ್ ಅವರ ಹೊಸ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ. ಆಜಾದ್ ರಾಜೀನಾಮೆ ನಂತರ 64 ನಾಯಕರು ಪಕ್ಷ ತೊರೆದಿದ್ದಾರೆ.
ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ 51 ನಾಯಕರಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಕೂಡ ಸೇರಿದ್ದಾರೆ. ಅವರು ಜಂಟಿ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದರು.

ತಾರಾ ಚಂದ್‌ ಅವರ ಜೊತೆಗೆ ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಕಾಂಗ್ರೆಸ್‌ಗೆ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಆಜಾದ್ ಅವರನ್ನು ಬೆಂಬಲಿಸಿ ನಾವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಂಟಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇವೆ ಎಂದು ಬಲ್ವಾನ್ ಸಿಂಗ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, 73 ವಯಸ್ಸಿನ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು, ಪಕ್ಷವನ್ನು “ಸಮಗ್ರವಾಗಿ ನಾಶಪಡಿಸಲಾಗಿದೆ” ಮತ್ತು ಅದರ ಸಂಪೂರ್ಣ ಸಮಾಲೋಚನಾ ಕಾರ್ಯವಿಧಾನವನ್ನು “ಹಾಳುಗಡೆವಲಾಗಿದೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸಲಿದ್ದಾರೆ.
ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ಪ್ರಮುಖ ಕಾಂಗ್ರೆಸ್ ನಾಯಕರು, ನೂರಾರು ಪಂಚಾಯತ್ ರಾಜ್ ಸಂಸ್ಥೆ (ಪಿಆರ್‌ಐ) ಸದಸ್ಯರು, ಪುರಸಭೆ ಕಾರ್ಪೊರೇಟರ್‌ಗಳು ಮತ್ತು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಈಗಾಗಲೇ ಆಜಾದ್‌ ಪಕ್ಷ ಸೇರಲು ಕಾಂಗ್ರೆಸ್ ತೊರೆದಿದ್ದಾರೆ.

ಪ್ರಮುಖ ಸುದ್ದಿ :-   ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ...!

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement