ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಬಿರು ಬಿಸಲು ಹಾಗೂ ತಾಪಮಾನ ಹೆಚ್ಚಳದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.
ಏಪ್ರಿಲ್‌ ಮೊದಲ ವಾರದಲ್ಲಿ ದಾವಣಗೆರೆ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಮಳೆಯಾಗುತ್ತಿದೆ. ಏಪ್ರಿಲ್​ 8ರ ಬಳಿಕ ಕರ್ನಾಟಕದ 25 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್​ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

 

 

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement