ಕರ್ನಾಟಕದಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಿ ಆದೇಶ

ಬೆಂಗಳೂರು: ಹಿಜಾಬ್ ಕೇಸರಿ ಶಾಲು ವಿವಾದದ ಹಿನ್ನೆಲೆ ಕಾಲೇಜುಗಳಿಗೆ ನೀಡಲಾಗಿದ್ದ ರಜೆಯನ್ನು ಮತ್ತೆ ವಿಸ್ತರಣೆ ಮಾಡಿ ಶುಕ್ರವಾರ (ಫೆಬ್ರವರಿ 11) ಆದೇಶ ಹೊರಡಿಸಲಾಗಿದೆ.

ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಸಲಾಗಿದೆ.ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದೆ. ಹಾಗೂ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ತಿಳಿಸಿದೆ.

ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಎಂದು ತಿಳಿಸಲಾಗಿದೆ.

 

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

ನಿಮ್ಮ ಕಾಮೆಂಟ್ ಬರೆಯಿರಿ

advertisement