ಕತಾರಿನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಭೇಟಿಯಾದ ಭಾರತೀಯ ರಾಯಭಾರಿ

ನವದೆಹಲಿ : ಇನ್ನೂ ತಿಳಿದಿಲ್ಲದ ಕಾರಣಗಳಿಗಾಗಿ ಕತಾರಿನಲ್ಲಿ ಅಕ್ಟೋಬರ್‌ನಲ್ಲಿ ಮರಣದಂಡನೆ ಶಿಕ್ಷೆ ಗುರಿಯಾಗಿರುವ  ಮಾಜಿ ನೌಕಾಪಡೆಯ ಎಂಟು  ಮಾಜಿ  ಸಿಬ್ಬಂದಿಯನ್ನು ಕತಾರಿನ ಭಾರತದ ರಾಯಭಾರಿ ಭಾನುವಾರ ಭೇಟಿಯಾಗಿದ್ದಾರೆ ಎಂದು ಸರ್ಕಾರ ಗುರುವಾರ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಅವರು, “ನಮ್ಮ ರಾಯಭಾರಿ ಡಿಸೆಂಬರ್ 3 ರಂದು ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು ಭೇಟಿಯಾಗಲು ಕಾನ್ಸುಲರ್ ಅನುಮತಿ ಪಡದರು” ಎಂದು ಹೇಳಿದರು.
ಮರಣದಂಡನೆಯ ವಿರುದ್ಧ ಭಾರತದ ಮೇಲ್ಮನವಿಯಲ್ಲಿ, ಇದುವರೆಗೆ ಎರಡು ವಿಚಾರಣೆಗಳು ನಡೆದಿವೆ (ಇವುಗಳು ನವೆಂಬರ್ 23 ಮತ್ತು ನವೆಂಬರ್ 30 ರಂದು ನಡೆದವು). ನಾವು ವಿಷಯವನ್ನು ನಿಕಟವಾಗಿ ಅನುಸರಿಸುತ್ತಿದ್ದೇವೆ ಮತ್ತು ಅವರಿಗೆ ಎಲ್ಲಾ ಕಾನೂನು ಮತ್ತು ದೂತಾವಾಸದ ಸಹಾಯವನ್ನು ನೀಡುತ್ತಿದ್ದೇವೆ. ಈ ಸಮಸ್ಯೆ ಸೂಕ್ಷ್ಮವಾಗಿದೆ. ಆದರೆ ನಾವು ಏನು ಮಾಡಬಹುದೋ ಅದನ್ನು ಮಾಡುತ್ತೇವೆ ಎಂದು ಅರಿಂದಮ್ ಬಾಗ್ಚಿ ಹೇಳಿದರು.

ಪ್ರಧಾನಿ ಮೋದಿ ಅವರು (ದ) CoP28 (ಶೃಂಗಸಭೆ) ಬದಿಯಲ್ಲಿ ದುಬೈನಲ್ಲಿ ಕತಾರ್ ಎಮಿರ್ ಶೇಖ್ ತಮೀಮ್ ನಿನ್ ಹಮದ್ ಅವರನ್ನು ಭೇಟಿಯಾಗಿದ್ದಾರೆ ಅವರು ಭಾರತೀಯ ಸಮುದಾಯದ ಯೋಗಕ್ಷೇಮ ಹಾಗೂ ಒಟ್ಟಾರೆ ದ್ವಿಪಕ್ಷೀಯ ಸಂಬಂಧದ ಬಗ್ಗೆ ಉತ್ತಮ ಮಾತುಕತೆ ನಡೆಸಿದರು ಎಂದು ಬಾಗ್ಚಿ ಹೇಳಿದರು.
ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ ಪಾಕಾಳ, ಕಮಾಂಡರ್ ಅಮಿತ ನಾಗ್ಪಾಲ್, ಕಮಾಂಡರ್ ಸಂಜೀವ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ ವರ್ಮಾ, ಕ್ಯಾಪ್ಟನ್ ಸೌರಭ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂಧಿತ ನೌಕಾ ಸಿಬ್ಬಂದಿಯಾಗಿದ್ದಾರೆ.
ಎಂಟು ಮಾಜಿ ನೌಕಾಪಡೆಯ ಅಧಿಕಾರಿಗಳು ಒಮ್ಮೆ ಭಾರತದ ಪ್ರಮುಖ ಯುದ್ಧನೌಕೆಗಳಿಗೆ ಕಮಾಂಡರ್ ಆಗಿದ್ದರು ಮತ್ತು ಕತಾರ್‌ನ ಸಶಸ್ತ್ರ ಪಡೆಗಳಿಗೆ ತರಬೇತಿ ಮತ್ತು ಸಂಬಂಧಿತ ಸೇವೆಗಳನ್ನು ಒದಗಿಸುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement