ಇಂದು ಸಂಜೆ 7ರಿಂದ ಸೋಮವಾರದ ವರೆಗೆ ವೀಕೆಂಡ್‌ ಕರ್ಫ್ಯೂ ಜಾರಿ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಇದು ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ವೀಕೆಂಡ್ ಜಾರಿಯಲ್ಲಿ ಇರುತ್ತದೆ.
ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ಇನ್ನೆರಡು ದಿನ ಮತ್ತೆ ಸ್ತಬ್ಧವಾಗಲಿದೆ. ಆದರೆ ಈ ಸಮಯದಲ್ಲಿ ಬೆಳಗ್ಗೆ‌ 6ರಿಂದ 10ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಅವಕಾಶ ಕೊಟ್ಟಿದೆ. ಈ ಸಮಯದಲ್ಲಿ ಅನಗತ್ಯ ವಾಹನ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಗತ್ಯ ಹಾಗೂ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಅಂತಾರಾಜ್ಯ ಜಿಲ್ಲೆಗಳ ಪ್ರವಾಸಕ್ಕೂ ನಿರ್ಬಂಧ ಹೇರಲಾಗಿದೆ. ಈ ನಿಮಿತ್ತ ಸರ್ಕಾರ ಈ ಎರಡು ದಿನಗಳ ವೀಕೆಂಡ್ ಕರ್ಫ್ಯೂ ವೇಳೆ ಏನಿರುತ್ತದೆ.. ಏನಿರುವುದಿಲ್ಲ ಎಂಬುದು ಮುಖ್ಯವಾಗುತ್ತದೆ. ಮನೆಯಿಂದ ಆಚೆ ತೆರಳುವ ಮುನ್ನ ಕರ್ಫ್ಯೂ ನಿಯಮಗಳ ಬಗ್ಗೆ ತಿಳಿದಿರುವುದು ಒಳಿತು. ಯಾಕೆಂದರೆ ಅನಗತ್ಯ ಓಡಾಡಿದರೆ ಪೊಲೀಸರು ವಾಹನಗಳನ್ನು ಸೀಜ್‌ ಮಾಡಲಿದ್ದಾರೆ.
ವಾರದ ಕರ್ಫ್ಯೂ ಸಮಯದಲ್ಲಿ

* ವೀಕೆಂಡ್ ಓಡಾಟ ಬಂದ್
* ಶುಕ್ರವಾರ ರಾತ್ರಿ 7 ಗಂಟೆಯಿಂದಲೇ ವೀಕೆಂಡ್ ಲಾಕ್ ಆರಂಭ
* ಸೋಮವಾರ ಬೆಳಿಗ್ಗೆ 5ರ ವರೆಗೆ ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ
ಬೆಂಗಳೂರಿನ ಎಲ್ಲಾ ಫ್ಲೈಓವರ್ ಗಳು ಬಂದ್
* ದಿನಸಿ ಅಂಗಡಿಗಳು, ಹಣ್ಣು ತರಕಾರಿ, ಹಾಲಿನ ಡೇರಿ, ಮೀನು, ಮಾಂಸದ ಅಂಗಡಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಓಪನ್
* ಬಾರ್, ರೆಸ್ಟೋರೆಂಟ್​ನಲ್ಲಿ ಮದ್ಯ ಸೇವನೆಗೆ ಅವಕಾಶವಿಲ್ಲ. ಮದ್ಯ ಪಾರ್ಸೆಲ್​ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಅವಕಾಶ
* ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ
* ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅನುಮತಿ
* ಬ್ಯಾಂಕ್, ಇನ್ಶೂರೆನ್ಸ್ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ
* ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್
* ಸರ್ಕಾರಿ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿ ಕೆಲಸಕ್ಕೆ ಅನುಮತಿ
* ಆಟೋ, ಟ್ಯಾಕ್ಸಿ ಕಂಪ್ಲೀಟ್ ಬಂದ್
* ಇ-ಕಾಮರ್ಸ್ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ
* ಅಂತಾರಾಜ್ಯ, ಜಿಲ್ಲೆಗಳ ನಡುವೆ ಸಂಚಾರಕ್ಕೆ ಬಂದ್
*ರೈಲು ಹಾಗೂ ವಿಮಾನ ಸಂಚಾರ ಮಾಡುವವರಿಗೆ ಅನುಮತಿ, ರೈಲು ಹಾಗೂ ವಿಮಾನ ಟಿಕೆಟ್‌ಗಳನ್ನು ಗುರುತಿಗಾಗಿ ಬಳಸಬಹುದು.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement