ಶಿವಮೊಗ್ಗ : ಯುವಕನಿಗೆ ಚಾಕು ಇರಿತ ಪ್ರಕರಣ ; ಇಬ್ಬರ ಬಂಧನ

 ಶಿವಮೊಗ್ಗ : ನಗರದಲ್ಲಿ ಸೋಮವಾರ ನಡೆದ ಗಲಾಟೆ ಸಮಯದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕ್ರಾಂತಿಕಾರಿ ವೀರ ಸಾವರ್ಕರ್‌ ಫ್ಲೆಕ್ಸ್‌ ವಿವಾದ ಭುಗಿಲೆದ್ದ ಕೆಲ ಹೊತ್ತಿನ ಬಳಿಕ ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಡರಾತ್ರಿ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಜೆಇಲ್ಲಿನ ಜೆ.ಸಿ.ನಗರ ಎರಡನೇ ಕ್ರಾಸ್ ನಿವಾಸಿ ನದೀಮ್(25) ಹಾಗೂ ಬುದ್ಧ ನಗರ ಎರಡನೇ ಕ್ರಾಸ್ ನಿವಾಸಿ ಅಬ್ದುಲ್ ರೆಹಮಾನ್ (25) ಎಂದು ಹೇಳಲಾಗಿದೆ. ಪ್ರೇಮ್ ಸಿಂಗ್ ಅವರು ನಗರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಸಂಜೆ ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ವೇಳೆ ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಪ್ರೇಮ್ ಸಿಂಗ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಗಾಯಗೊಂಡ ಪ್ರೇಮ್ ಸಿಂಗ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫ್ಲೆಕ್ಸ್‌ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ 3 ದಿನ, ಭದ್ರಾವತಿಯಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ಕಡವೆ ಬೇಟೆ : ಅರಣ್ಯಾಧಿಕಾರಿ ಸಿಬ್ಬಂದಿ ದಾಳಿ; ಒಬ್ಬನ ಬಂಧನ, ಐವರು ಪರಾರಿ

ಸೋಮವಾರ ರಾತ್ರಿ ಕಾನೂನು, ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ, ನಗರದ ವಿವಿಧೆಡೆ ಪರಿಶೀಲನೆ ನಡೆಸಿದರು. ಫ್ಲೆಕ್ಸ್ ಅಳವಡಿಕೆ ಗಲಾಟೆ ನಂತರ ಚೂರಿ ಇರಿತ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮುಂದಿನ ಮೂರು ದಿನಗಳ ಕಾಲ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರ ಓಡಾಟವನ್ನು ನಿಷೇಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ನಗರದಲ್ಲಿ ಸೋಮವಾರ ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚೂರಿ ಇರಿತದಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement