ಬಾಂಗ್ಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಮೋದಿ ಭೇಟಿ,ನಮನ

 

ಢಾಕಾ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಾಂಗ್ಲಾದೇಶದ ಢಾಕಾದ ಸಾವರ್ ಉಪಜಿಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕ್ಕೆ ಭೇಟಿ ನೀಡಿದರು. 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಮಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಮಾಲಾರ್ಪಣೆ ಮಾಡಿದರು.
ಎರಡು ದಿನಗಳ ಭೇಟಿಗೆ ಶುಕ್ರವಾರ ಬೆಳಿಗ್ಗೆ ಢಾಕಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಭವ್ಯ ಸ್ವಾಗತ ನೀಡಿದರು.
. 1971 ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಸ್ಮರಣಾರ್ಥ ಬಾಂಗ್ಲಾದೇಶದ ಮಿಲಿಟರಿ ಸಿಬ್ಬಂದಿಯೊಂದಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಸಿ ನೆಟ್ಟ ಪ್ರಧಾನಿ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ಬಾಂಗ್ಲಾ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಬಾಂಗ್ಲಾದ ದೇಶಭಕ್ತ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ್ದೇನೆ. ಹುತಾತ್ಮರ ಶೌರ್ಯವು ಭವಿಷ್ಯದ ಪೀಳಿಗೆಗೆ ಅನ್ಯಾಯದ ವಿರುದ್ಧ ಹೋರಾಡಲು ಮತ್ತು ಸದಾಚಾರ ರಕ್ಷಿಸಲು ಪ್ರೇರಣೆ ನೀಡಲಿ ಎಂದು ಪ್ರಧಾನಿ ಮೋದಿ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.
ಬಾಂಗ್ಲಾದೇಶ ತನ್ನ 50 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಕೋವಿಡ್-19 ಕಾಣಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ವಿದೇಶಿ ಭೇಟಿಯಾಗಿದೆ.

ಪ್ರಮುಖ ಸುದ್ದಿ :-   200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement