ಮೇಕೆದಾಟು ಯೋಜನೆ: ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಮೇಕೆದಾಟು ಅಣೆಕಟ್ಟು ಸಮಗ್ರ ಯೋಜನಾ ವರದಿ (ಡಿಪಿಆರ್) ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ.
ಇಂದು, ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಜುಲೈ 26ರಂದು ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿತು. ಹಾಗೂ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು.

ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಉಳಿದ ಹಿನ್ನೆಲೆಯಲ್ಲಿ ಜುಲೈ 22ರಂದು ನಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚಿಸುವುದಿಲ್ಲ ಎಂದು ಕರ್ನಾಟಕ, ತಮಿಳುನಾಡು ಸರ್ಕಾರ ಪರ ವಕೀಲರು ಕೋರ್ಟ್‍ಗೆ ತಿಳಿಸಿದರು.
ಮೇಕೆದಾಟು ನದಿಗೆ ಅಣೆಕಟ್ಟು ಕಟ್ಟಲು ಹೊರಟಿರುವ ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್ ಸಲ್ಲಿಸಿದ್ದು, ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲು ಸಮಿತಿಗೆ ಮನವಿ ಮಾಡಿತ್ತು. ಆದರೆ ತಮಿಳುನಾಡು ಇದಕ್ಕೆ ಆಕ್ಷೇಪಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement