ಬೆಂಗಳೂರು: ವಿಧಾನ ಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಅಧಿಕೃತವಾಗಿ ನೂತನ ಸಿಎಲ್ಪಿ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ಜೂನ್ 3 ರಂದು ಡಿ.ಕೆ. ಶಿವಕುಮಾರ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನಸೌಧದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿಎಲ್ಪಿ ಕಾರ್ಯದರ್ಶಿ ಅಲ್ಲಂಪ್ರಭು ಪಾಟೀಲ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೇವಾಲಾ ಮತ್ತು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಉಪಸ್ಥಿತರಿದ್ದರು. ಮೇ 28 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ ಅವರ ಹೆಸರನ್ನು ನೂತನ ಸಿಎಲ್ಪಿ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಿದರು. ಈ ಪ್ರಸ್ತಾಪಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಸಂಪೂರ್ಣ ಬೆಂಬಲ ಸೂಚಿಸಿದರು.
ಸಿಎಲ್ಪಿ ಸಭೆಯ ಒಳಗಡೆ ನಡೆದಿದ್ದೇನು?
ಶಾಸಕಾಂಗ ಪಕ್ಷದ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು.ಸಭೆಯ ಆರಂಭದಲ್ಲಿ ಸಿದ್ದರಾಮಯ್ಯ ಅವರು, “ನೂತನ ಸಿಎಲ್ಪಿ ನಾಯಕರ ಆಯ್ಕೆಯ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ವಿವೇಚನೆಗೆ ಬಿಡಬೇಕು” ಎಂಬ ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಅನುಮೋದನೆ ನೀಡಿದರು. ಈ ನಿರ್ಣಯವನ್ನು ಸಭೆಯಲ್ಲಿದ್ದ ಎಲ್ಲಾ ನಾಯಕರು ಸರ್ವಾನುಮತದಿಂದ ಅಂಗೀಕರಿಸಿದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು, ನೂತನ ಸಿಎಲ್ಪಿ ನಾಯಕನ ಸ್ಥಾನಕ್ಕೆ ಡಿ.ಕೆ. ಶಿವಕುಮಾರ ಹೆಸರನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾಪವನ್ನೂ ಡಾ. ಜಿ. ಪರಮೇಶ್ವರ ಬೆಂಬಲಿಸಿದರು. ತದನಂತರ, ಡಿ.ಕೆ. ಶಿವಕುಮಾರ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕರಾಗಿ ಚುನಾಯಿತರಾದರು.
ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ ಮತ್ತೊಂದು ನಿರ್ಣಯವನ್ನು ಮಂಡಿಸಿದರು. ಇದರಲ್ಲಿ ಅವರು ತಮಗೆ ಮಾರ್ಗದರ್ಶನ ನೀಡಿದ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಲ್ಲದೆ, ಮುಂದಿನ ದಿನಗಳಲ್ಲೂ ಅವರ ನಿರಂತರ ಬೆಂಬಲ ಮತ್ತು ಮಾರ್ಗದರ್ಶನ ತಮಗೆ ಬೇಕು ಎಂದು ಕೋರಿದರು.
ರಾಜ್ಯಪಾಲರ ಭೇಟಿ ಮತ್ತು ಸಂಪುಟ ರಚನೆ
ರಾಜ್ಯಪಾಲರ ಭೇಟಿ ಮತ್ತು ಸಂಪುಟ ರಚನೆ
ಲೋಕಭವನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರನ್ನು ಡಿ.ಕೆ.ಶಿವಕುಮಾರ (D.K.Shivakumar) ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಸಿದ್ದರಾಮಯ್ಯ ಸೇರಿದಂತೆ 10 ಮಂದಿ ಕಾಂಗ್ರೆಸ್ ನಾಯಕರ ಜೊತೆಗೂಡಿ ಡಿಕೆಶಿ ರಾಜ್ಯಪಾಲರ ಭವನಕ್ಕೆ ತೆರಳಿದರು. ರಾಜ್ಯಪಾಲರ ಬಳಿ ಸಿಎಲ್ಪಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು ಸರ್ಕಾರ ರಚಿಸಲು ರಾಜ್ಯಪಾಲರು ಡಿಕೆಶಿಗೆ ಆಹ್ವಾನ ನೀಡಿದ್ದು, ಜೂ.3 ರಂದು (ಬುಧವಾರ) ಸಾಯಂಕಾಲ 4:05 ಕ್ಕೆ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರಂಭದಲ್ಲಿ ಮುಖ್ಯಮಂತ್ರಿಯವರ ಜೊತೆಗೆ ಸುಮಾರು 8 ರಿಂದ 10 ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ನಾಯಕತ್ವದ ಗೊಂದಲ ಈಗ ಅಧಿಕೃತವಾಗಿ ಬಗೆಹರಿದಿದ್ದು, ಇಡೀ ಹೈಕಮಾಂಡ್ನ ಗಮನ ಈಗ ಉಪಮುಖ್ಯಮಂತ್ರಿ ಸ್ಥಾನದ ಕಡೆಗೆ ನೆಟ್ಟಿದೆ. ಡಿ.ಕೆ. ಶಿವಕುಮಾರ ಸಂಪುಟದಲ್ಲಿ ಯಾರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಕುತೂಹಲ ತೀವ್ರಗೊಂಡಿದೆ. ಕಳೆದ ಗುರುವಾರ (ಮೇ 28) ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್ ನಿರ್ಧಾರದಂತೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿತ್ತು.
ರಾಜೀನಾಮೆ ನೀಡಿದ ಮರುದಿನವೇ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅಧಿಕಾರ ಹಸ್ತಾಂತರದ ಕುರಿತು ಚರ್ಚಿಸಿದ್ದರು. ತಮಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಸೂಚನೆಯ ಮೇರೆಗೇ ತಾವು ಹುದ್ದೆಯಿಂದ ಕೆಳಗಿಳಿದಿರುವುದಾಗಿ ತಿಳಿಸಿದ್ದರು. ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ದೆಹಲಿಯಲ್ಲಿ ನಡೆದ ಸುದೀರ್ಘ ಸರಣಿ ಮಾತುಕತೆಗಳ ಫಲವಾಗಿ ಈ ನಾಯಕತ್ವ ಬದಲಾವಣೆ ಸುಸೂತ್ರವಾಗಿ ನಡೆದಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದಾಗಿನಿಂದಲೂ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ 2.5 ವರ್ಷಗಳ ಅವಧಿಯ ಅಧಿಕಾರ ಹಂಚಿಕೆ ಸೂತ್ರದ ಒಪ್ಪಂದವಾಗಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಿರಂತರವಾಗಿ ಕೇಳಿಬರುತ್ತಿದ್ದವು, ಅದು ಈಗ ನಿಜವಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ