ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಕೃ. ನರಹರಿ ಅವರು ನಿಧನರಾಗಿದ್ದಾರೆ.
ಅವರಿಗೆ 93 ವರ್ಷ ವಯಸ್ಸಾಗಿತ್ತು.
ಇಂದು, ಬುಧವಾರ (ಅಕ್ಟೋಬರ್ 8) ಬೆಳಗ್ಗೆ 4.30ಕ್ಕೆ ಕೃ. ನರಹರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆರ್‌ಎಸ್‌ಎಸ್ ಪ್ರಮುಖರು ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ದೇಶದ ಮೇಲೆ ಹೇರಲಾಗಿದ್ದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಕ್ಷೇತ್ರೀಯ ಕಾರ್ಯವಾಹಕರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೃ.ನರಹರಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ. ಮೊದಲಾದವರು ತೀವ್ರ ಸಂತಾಪ ಸೂಚಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ