ಮೇ 13ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಜಲಧಾರೆ ಸಮಾರೋಪ ಸಮಾರಂಭ, 4 ಲಕ್ಷ ಜನ ಸೇರುವ ನಿರೀಕ್ಷೆ: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್ ‘ಜನತಾ ಜಲ ಧಾರೆ’ ಸಮಾರೋಪ ಸಮಾರಂಭ ಮೇ 13 ರಂದು ನಡೆಯಲಿದ್ದು, 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ನದಿಗಳ ನೀರನ್ನು ಸಂಗ್ರಹಿಸಿ ಆರಂಭ ಮಾಡಿದ ಕಾರ್ಯಕ್ರಮ ಜನತಾ ಜಲಧಾರೆ ಕಾರ್ಯಕ್ರಮವಾಗಿದ್ದು, 180 ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದ ಹೊರ ವಲಯ ನೆಲಮಂಗಲ ಬಾವಿ ಕೆರೆ ರಸ್ತೆಯಲ್ಲಿರುವ ಮೈದಾನದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಮಾರೋಪ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.
ಎರಡು ರಾಷ್ಟ್ರೀಯ ಪಕ್ಷಗಳು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಜನರಿಗೆ ಭರವಸೆ ಕೊಟ್ಟರೂ ನಿಗದಿತ ಅವಧಿಯಲ್ಲಿ ಅನುಷ್ಠಾನ ಮುಗಿಸಿಲ್ಲ. ಕೃಷ್ಣ ಮೇಲ್ಕಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಮನವಿ ಮಾಡಿದ್ದಾರೆ. ಎತ್ತಿನ ಹೊಳೆ, ಮಹದಾಯಿ ಯೋಜನೆಗೂ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ರಾಜ್ಯದಲ್ಲಿ ಸರಿಯಾದ ರೀತಿಯಲ್ಲಿ ನದಿ ನೀರು ಉಪಯೋಗಿಸುವ ಸಂಕಲ್ಪ ಮಾಡಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ್ದೇ ಸರ್ಕಾರ ಬಂದರೆ ಐದು ವರ್ಷದಲ್ಲಿ ಎಲ್ಲ ನದಿ ನೀರು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನೀರಿನ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಹೀಗೆ ಮುಂದುವರೆದರೆ ಬೆಂಗಳೂರು ನಗರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದೆ. ಅರ್ಕಾವತಿ ನದಿ ಪುನಶ್ಚೇತನ ಮಾಡಲಾಗುವುದು ಅಂದುರು, ಆದರೆ ಅದು ಅಲ್ಲಿಗೇ ನಿಂತು ಹೋಯಿತು. ಬೆಂಗಳೂರಿನ ಹಲವು ಕೆರೆಗಳನ್ನು, ರಾಜ ಕಾಲುವೆಗಳನ್ನು ನುಂಗಿ ಹಾಕಲಾಗಿದೆ, ಅದನ್ನು ಸರಿಪಡಿಸಬೇಕು ಎಂದು ಹೇಳಿದರು.

ಒಂದು ಘನ ಉದ್ದೇಶಕ್ಕಾಗಿ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ಮೂರು ವರ್ಷಗಳಿಂದ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದವರಿಗೆ ಉತ್ತರ ಕೊಡುವ ಕಾರ್ಯಕ್ರಮ ಇದಾಗಿದೆ‌. ಕಾರ್ಯಕ್ರಮಕ್ಕೆ ನಾಲ್ಕರಿಂದ ಐದು ಲಕ್ಷ ಜನ ಭಾಗವಹಿಸುತ್ತಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.
ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ 6:30ಕ್ಕೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ 20 ಜನರ ತಂಡ ವಾರಣಾಸಿಯಿಂದ ಬರುತ್ತಿದೆ. ನಮ್ಮ ರಾಜ್ಯದಲ್ಲಿ ನೀರನ್ನು ಸಂಪೂರ್ಣವಾಗಿ ಬಳಕೆ ಮಾಡಲು ಗಂಗಾ ತಾಯಿ ಆಶೀರ್ವಾದ ಪಡೆಯಲು ಈ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನೆಲಮಂಗಲ ಮೈದಾನದಿಂದಲೇ ಜಡಿಎಸ್‌ನ 2023 ರ ಚುನಾವಣಾ ಪ್ರಚಾರ ಆರಂಭವಾಗಲಿದೆ ಎಂದರು.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement