ಕನ್ನಡದ ಹಿರಿಯ ಕವಿ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ

ಧಾರವಾಡ: ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ.
ಭಾನುವಾರ (ಜನವರಿ 30) ನೀಡಿರುವ ಧಾರವಾಡದ ಎಸ್​ಡಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಪ್ರಕಾರ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ.
ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿರುವ ಕಾರಣ ಉಸಿರಾಡಲು ತೊಂದರೆಯಾಗುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅಕ್ಯೂಟ್​ ರೆಸ್ಪಿರೇಟರಿ ಡಿಸ್ಟ್ರೆಸ್​ ಸಿಂಡ್ರೋಮ್​ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದು, . ಕಳೆದ 2 ವಾರದಿಂದ ಎಸ್​ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ನಿಮ್ಮ ಕಾಮೆಂಟ್ ಬರೆಯಿರಿ

advertisement