ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ರಾಜೀನಾಮೆ ನೀಡಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಕುನಾರ ಹೆಂಬ್ರಾಮ್..!

ಕೋಲ್ಕತ್ತಾ:  ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಕುನಾರ್ ಹೆಂಬ್ರಾಮ್ ಅವರು ವೈಯಕ್ತಿಕ ಕಾರಣ ನೀಡಿ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷವನ್ನು ತೊರೆದಿದ್ದಾರೆ.
ಹೆಂಬ್ರಾಮ್ ಜಾರ್‌ಗ್ರಾಮದ ಬಿಜೆಪಿ ಸಂಸದರಾಗಿದ್ದು, ರಾಜ್ಯದ ಬುಡಕಟ್ಟು ಪ್ರಾಬಲ್ಯದ ಮಾಜಿ ಮಾವೋವಾದಿಗಳ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆ ನಡೆಸಲಿರುವ ಕೆಲವು ದಿನಗಳ ಮೊದಲು ಈ ಬೆಳವಣಿಗೆ ನಡೆದಿದೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಹೆಂಬ್ರಾಂ, ತಮ್ಮ ನಿರ್ಧಾರದ ಬಗ್ಗೆ ಪಕ್ಷಕ್ಕೆ ಈಗಾಗಲೇ ತಿಳಿಸಿದ್ದೇನೆ. ವೈಯಕ್ತಿಕ ಕಾರಣಗಳಿಂದ ನಾನು ಪಕ್ಷವನ್ನು ತೊರೆಯಲು ಬಯಸುತ್ತೇನೆ. ಬೇರೆ ಪಕ್ಷ ಸೇರುವ ಆಸೆ ನನಗಿಲ್ಲ. ನಾನು ಇತರ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಇಂತಹ ಉಪಕ್ರಮಗಳ ಮೂಲಕ ನಾನು ಜನರ ಸೇವೆಯನ್ನು ಮುಂದುವರಿಸುತ್ತೇನೆ ಎಂದು ಎಂಜಿನಿಯರ್-ರಾಜಕಾರಣಿ ಹೇಳಿದ್ದಾರೆ.
ಆದರೆ, ಈ ಬಾರಿ ಜಾರ್‌ಗ್ರಾಮ ಕ್ಷೇತ್ರದಿಂದ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಉತ್ಸುಕವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಮಾರ್ಚ್ 11 ರಂದು ಜಾರ್‌ ಗ್ರಾಮದಲ್ಲಿ ಸಾರ್ವಜನಿಕ ಸಭೆ ನಡೆಸುವ ಸಾಧ್ಯತೆಯಿದೆ. ಇದಕ್ಕೂ ಮೊದಲು, ರಣಘಾಟ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾದ ಮುಕುತ್ ಮಣಿ ಅಧಿಕಾರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಗೊಂಡರು.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ವಕ್ತಾರ ಸಾಮಿಕ್ ಭಟ್ಟಾಚಾರ್ಯ, “ವೈಯಕ್ತಿಕ ಕಾರಣಗಳಿಂದ ಅವರು ಮುಂದುವರಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು ಈಗಾಗಲೇ ತಿಳಿಸಿದ್ದಾರೆ. ಅದಕ್ಕೂ ಲೋಕಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಆಗಸ್ಟ್ 15 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ತಮ್ಮ ಭಾಷಣವನ್ನು ಕೆಂಪು ಕೋಟೆಯಿಂದ ಮಾಡಲಿದ್ದಾರೆ ಎಂಬುದು ಖಚಿತವಾಗಿದೆ. ಆದ್ದರಿಂದ, ಈ ರೀತಿಯ ಬೆಳವಣಿಗೆಗಳು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

ಆದರೆ ಇತ್ತೀಚಿನ ಬೆಳವಣಿಗೆಯ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಟಿಎಂಸಿ, “ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಇಂತಹ ಇನ್ನಷ್ಟು ಬೆಳವಣಿಗೆಗಳು ನಡೆಯಲಿವೆ. ಸುಭಾಸ ಸರ್ಕಾರ್, ದಿಲೀಪ ಘೋಷ್ ಮತ್ತು ಸುಕಾಂತ ಮಜುಂದಾರ್ ಅವರಂತಹ ನಾಯಕರ ವಿರುದ್ಧ ಅವರದೇ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿಯನ್ನು ಬಯಸುವವರು ಬಿಜೆಪಿಯೊಂದಿಗೆ ಉಳಿಯಲು ಸಾಧ್ಯವಿಲ್ಲ ಎಂದು ಪಕ್ಷದ ಹಿರಿಯ ನಾಯಕ ಸಂತನು ಸೇನ್ ಹೇಳಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement