ಇಂದು ಕರ್ನಾಟಕ ಪ್ರವೇಶಿಸಿದ ಮನ್ಸೂನ್

ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಜೂನ್ 2ರಂದು ರಾಜ್ಯಕ್ಕೆ ಮಾನ್ಸೂನ್ ಪ್ರವೇಶಿಸಬಹುದು ಎಂದು ಹೇಳಿತ್ತು. ಆದರೆ, ಅದಕ್ಕೂ ಮುನ್ನವೇ ಇಂದು, ಮಂಗಳವಾರ ನೈಋತ್ಯ ಮಾನ್ಸೂನ್ ಮಳೆ ರಾಜ್ಯಕ್ಕೆ ಕಾಲಿಟ್ಟಿದ್ದು, ಸಿಹಿ ಸುದ್ದಿ ನೀಡಿದೆ.

ಇತ್ತೀಚಿನ  ಮಾಹಿತಿ ಪ್ರಕಾರ, ಉತ್ತರ ಕನ್ನಡ ಮತ್ತು ರಾಜ್ಯದ ಕರಾವಳಿ ಪ್ರದೇಶಗಳು, ಬೆಂಗಳೂರು (ನಗರ ಮತ್ತು ಗ್ರಾಮಾಂತರ) ಮತ್ತು ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ.
ಐಎಂಡಿ ಅಧಿಕಾರಿಗಳ ಪ್ರಕಾರ, ಜೂನ್ ಮೊದಲ ವಾರದಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಭಾಗಗಳನ್ನು ಪ್ರವೇಶಿಸುವ ಸಾಧ್ಯತೆಯಿದೆ. ಜೂನ್ 7 ರಿಂದ ಇಡೀ ರಾಜ್ಯದಲ್ಲಿ ಮಳೆಯನ್ನು ನಿರೀಕ್ಷಿಸಬಹುದು ಎಂದು ಅದು ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement