ಆಗಸ್ಟ್‌ 26ರಂದು ಬೆಂಗಳೂರಿನ ಇಸ್ರೋ ಕಚೇರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳನ್ನು ನೇರವಾಗಿಯೇ ಭೇಟಿ ಮಾಡಿ ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆಗಸ್ಟ್‌ 26) ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಬೆಳಗ್ಗೆ ಬೆಳಗ್ಗೆ 7 ರಿಂದ 8 ಗಂಟೆವರೆಗೆ ಪ್ರಧಾನಿ ಮೋದಿ ಅವರು ಇಸ್ರೋ ಕಚೇರಿಯಲ್ಲಿರುವ ವಿಜ್ಞಾನಿಗಳನ್ನು ಭೇಟಿ ಮಾಡಲಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ ಮತ್ತು ಚಂದ್ರಯಾನ 3 ಯಶಸ್ವಿಗೆ ಕಾರಣರಾದ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಎಲ್ಲ ಇಸ್ರೋ ವಿಜ್ಞಾನಿಗಳೊಂದಿಗೆ ಸಭೆ ನಡೆಸಿ, ಚಂದ್ರಯಾನ-3 ಯಶಸ್ವಿಯ ಎಲ್ಲ ಹಂತಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.
ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್‌ ಸಮ್ಮೇಳನದಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ ಜೊತೆ ದೂರವಾಣಿ ಮೂಲಕ ಮಾತನಾಡಿ ಅಭಿನಂದಿಸಿದ್ದರು. ಈಗ ಅವರು ಶನಿವಾರ ಬೆಂಗಳೂರಿಗೆ ಬರಲಿದ್ದು, ಇಸ್ರೋ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement