ಉಜ್ವಲ ಯೋಜನೆಯಡಿ ಮೂರು ಸಿಲಿಂಡರ್‌ ಉಚಿತ ನೀಡಲು ಕೇಂದ್ರ ಚಿಂತನೆ

ನವದೆಹಲಿ: ಉಜ್ವಲ ಯೋಜನೆಯಡಿ ಮೂರು ಗೃಹ ಬಳಕೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
14.2 ಕೆಜಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಈಗ 800 ರೂ.ಗಳಿಗಿಂತಲೂ ಹೆಚ್ಚಾಗಿರುವುದರಿಂದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದು ಕಾರ್ಯಗತವಾದರೆ ಏಪ್ರಿಲ್‌ನಿಂದ ಮೂರು ತಿಂಗಳ ಕಾಲ ಉಜ್ವಲ ಯೋಜನೆ ಫಲಾನುಭವಿಗಳಿಗೆ ತಿಂಗಳಿಗೆ ಒಂದರಂತೆ ಮೂರು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆಯಂತೆ. ಈ ಕುರಿತಾದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ. ಅಡುಗೆ ಅನಿಲದ ಸಿಲಿಂಡರ್‌ ದರ ಈಗ ಏರುತ್ತಲೇ ಸಾಗಿದೆ.
ಜನವರಿಯಲ್ಲಿ 694 ರೂ,ಇದ್ದ ಸಿಲಿಂಡರ್ ಈಗ 819 ರೂ.ಗಳಿಗೆ ತಲುಪಿದೆ. ಕಳೆದ ವರ್ಷದ ಮೇನಿಂದ ಸಿಲಿಂಡರ್‌ ಏರುತ್ತಿದೆಯೇ ಹೊರತು ಕಡಿಮೆಯಾಗಿಲ್ಲ. ಸುಮಾರು ಒಂದು ವರ್ಷದ ಸನಿಹದಲ್ಲಿ ಸಿಲಿಂಡರ್ ಬೆಲೆಯಲ್ಲಿ 237.50 ರೂ. ಹೆಚ್ಚಳವಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜಿನಲ್ಲಿ ಕಳೆದ ವರ್ಷ ಮೂರು ತಿಂಗಳು ಉಜ್ವಲ ಯೋಜನೆ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗಿತ್ತು. ಅದೇ ರೀತಿ ಈ ಸಲವೂ ಉಚಿತವಾಗಿ 3 ಸಿಲಿಂಡರ್ ನೀಡುವ ಕುರಿತು ಚಿಂತನೆ ನಡೆಸುತ್ತಿದೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement