ಭಾರೀ ಮಳೆ..: ಜುಲೈ 6 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಇದಕ್ಕಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರವರೆಗೆ ಅರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಉಡುಪಿ ವರದಿ…
ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಲಾಗಿದೆ.
ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ6 ರಂದು ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement