ಬೆಳಗಾವಿ: ಸ್ವಗ್ರಾಮ ತಲುಪಿದ ಸಂತೋಷ ಪಾಟೀಲ ಮೃತದೇಹ – ಕುಟುಂಬಸ್ಥರ ಆಕ್ರಂದನ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ, ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ.

ಪಾರ್ಥಿವ ಶರೀರ ತಾಲೂಕಿನ ಬಡಸ ಗ್ರಾಮಕ್ಕೆ  ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಆರೋಪಿಗಳನ್ನು ಬಂಧಿಸುವವರೆಗೂ ಶವ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ ಎಂದು ಹಠ ಹಿಡಿದ ಕುಟುಂಬಸ್ಥರನ್ನು ವೈದ್ಯರು ಹಾಗೂ ಪೊಲೀಸ್ ಅಧಿಕಾರಿಗಳ ತಂಡವು ಮನವೊಲಿಕೆ ಮಾಡಿದೆ.

ಮರಣೋತ್ತರ ಪರೀಕ್ಷೆ ವಿಳಂಬವಾದರೆ ಪ್ರಮುಖ ಸಾಕ್ಷ್ಯಗಳನ್ನು ದುರ್ಬಲಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕುಟುಂಬಸ್ಥರು ಒಪ್ಪಿದರು. ಮರಣೋತ್ತರ ಪರೀಕ್ಷೆ ಬಳಿಕ ಸಂತೋಷ ಪಾಟೀಲ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಬಳಿಕ ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಬೆಳಗಾವಿಯ ಬಡಸ ಗ್ರಾಮಕ್ಕೆ ಕಳುಹಿಸಲಾಯಿತು. ಗ್ರಾಮಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.ಗ್ರಾಮದ ಹೊರವಲಯದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement