ಕರೂರು ಕಾಲ್ತುಳಿತ ದುರಂತ: ಟಿವಿಕೆ ನಾಯಕನ ಬಂಧನ

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಹಿಂದೆ ಅವರ ವಿರುದ್ಧ ಕೊಲೆ ಯತ್ನ, ಕೊಲೆಗೆ ಸಮನಾದ ಅಪರಾಧಿಕ ನರಹತ್ಯೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಟಿವಿಕೆ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಶೇಖರ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.
ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಸಲ್ಲಿಸಲಾದ ಎಫ್‌ಐಆರ್ ಪ್ರಕಾರ, ಗೊಂದಲದ ಸಮಯದಲ್ಲಿ ಒಂದು ಹಂತದಲ್ಲಿ 11 ಜನರ ಸಾವಿಗೆ ಕಾರಣವಾದ ಉದ್ದೇಶಪೂರ್ವಕ ಕೃತ್ಯಗಳಿಗೆ ವಿಜಯ ಅವರನ್ನೇ ಹೆಸರಿಸಲಾಗಿದೆ. ರಾಜಕೀಯ ಶಕ್ತಿಯನ್ನು ಪ್ರದರ್ಶಿಸಲು ಜಿಲ್ಲೆಗೆ ಬಂದ ನಂತರ ವಿಜಯ ಉದ್ದೇಶಪೂರ್ವಕವಾಗಿ ನಾಲ್ಕು ಗಂಟೆ ತಡವಾಗಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದಾಗಿ ಜನಸಂದಣಿಯಲ್ಲಿ ಅಶಾಂತಿ ಮತ್ತು ಅನಿಯಂತ್ರಿತ ಪರಿಸ್ಥಿತಿ ಉಂಟಾಯಿತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಉಲ್ಲಂಘಿಸಿ ವಿಜಯ ಅವರು ಅನುಮತಿಯಿಲ್ಲದೆ ರೋಡ್ ಶೋ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement