ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದ ಕೇಂದ್ರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (JKNF) ಅನ್ನು ಕೇಂದ್ರ ಸರ್ಕಾರ ಮಂಗಳವಾರ ನಿಷೇಧಿಸಿದೆ.
ಆದೇಶದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಹುರಿಯತ್ ಕಾನ್ಫರೆನ್ಸ್‌ನ ಅಂಗವಾದ ಜೆಕೆಎನ್‌ಎಫ್‌ (JKNF) ಅನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಿದೆ.
ಜೆಕೆಎನ್‌ಎಫ್‌ (JKNF) “ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಗ್ರಹ ಪೀಡಿತವಾದ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ” ಎಂದು ಸರ್ಕಾರ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲವನ್ನು ನೀಡಲು ಜೆಕೆಎನ್‌ಎಫ್‌ (JKNF) ಸದಸ್ಯರು ಭಯೋತ್ಪಾದಕ ಚಟುವಟಿಕೆಗಳನ್ನು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅದು ಹೇಳಿದೆ.
ಜೆಕೆಎನ್‌ಎಫ್‌ (JKNF) ಸದಸ್ಯರು “ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಜ್ಜುಗೊಳಿಸುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಅದು ಹೇಳಿದೆ. ಐದು ವರ್ಷಗಳ ಅವಧಿಗೆ ಈ ಆದೇಶ ಜಾರಿಯಲ್ಲಿರುತ್ತದೆ

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement