ಗುಟ್ಖಾ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ತಮಿಳುನಾಡು ಸರ್ಕಾರದ ಮನವಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಗುಟ್ಕಾ ಮತ್ತು ಇತರ ತಂಬಾಕು ಆಧಾರಿತ ಉತ್ಪನ್ನಗಳ ಮಾರಾಟ, ತಯಾರಿಕೆ ಮತ್ತು ಸಾಗಣೆಯನ್ನು ನಿಷೇಧಿಸುವ ಮೇ 2018 ರ ಅಧಿಸೂಚನೆಯನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ ತಮಿಳುನಾಡು ಸರ್ಕಾರದ ಮನವಿಗೆ ಆಹಾರ ಸುರಕ್ಷತಾ ಆಯುಕ್ತರು ಹಾಗೂ ಇತರರಿಂದ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರಿದ್ದ ಪೀಠವು ತಮಿಳುನಾಡು ಸರ್ಕಾರ ಸಲ್ಲಿಸಿದ ಮನವಿಯ ಮೇರೆಗೆ ಆಹಾರ ಸುರಕ್ಷತಾ ಆಯುಕ್ತರು, ತಂಬಾಕು ವ್ಯಾಪಾರಿಗಳು ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ತಮಿಳುನಾಡು ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ಗುಟ್ಕಾ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟ, ಸಂಗ್ರಹಣೆ, ತಯಾರಿಕೆ ಇತ್ಯಾದಿಗಳನ್ನು ನಿಷೇಧಿಸುವ ಆಹಾರ ಸುರಕ್ಷತಾ ಆಯುಕ್ತರ ಆದೇಶಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ (2.3.4) (ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧ) ನಿಯಮಗಳು, 2011ರಿಂದ ಬೆಂಬಲಿತವಾಗಿದೆ ಎಂದು ವಾದಿಸಿದರು.

ಮೇ 23, 2018 ರಂದು ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ, ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು / ನಿಕೋಟಿನ್ ಹೊಂದಿರುವ ಇತರ ಅಗಿಯುವ ಆಹಾರ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಆ ಆದೇಶ ನಿಷೇಧಿಸಿತ್ತು.
ವರ್ಷದಿಂದ ವರ್ಷಕ್ಕೆ ಸತತ ಅಧಿಸೂಚನೆಗಳನ್ನು ಹೊರಡಿಸುವ ಮೂಲಕ ತಂಬಾಕು ಉತ್ಪನ್ನಗಳ ಮೇಲೆ ಶಾಶ್ವತ ನಿಷೇಧವನ್ನು ವಿಧಿಸಲು ಆಹಾರ ಸುರಕ್ಷತಾ ಆಯುಕ್ತರಿಗೆ ಅವಕಾಶ ನೀಡುವುದನ್ನು ಕಾನೂನಿನಡಿ ಅಧಿಕಾರವನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ.
ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿದ ತಮಿಳುನಾಡಿನಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾವನ್ನು ನಿಷೇಧಿಸುವ ಅಧಿಸೂಚನೆಗಳು ಅವರ ಅಧಿಕಾರದಲ್ಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಮತ್ತು ಅದನ್ನು ರದ್ದುಗೊಳಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement