ಕರ್ನಾಟಕದಲ್ಲಿ ಜು.27ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ನೈರುತ್ಯ ಮಾನ್ಸೂನ್ ಈಗಾಗಲೇ ರಾಜ್ಯವನ್ನು ಆವರಿಸಿದೆ. ಈ ನಡುವೆ ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತ ಈ ಹಿನ್ನೆಲೆ ಜುಲೈ 27ರ ವರೆಗೆ ರಾಜ್ಯದಲ್ಲಿ ಭರ್ಜರಿ ಮಳೆ ಆಗಲಿದೆ . ಅದರಲ್ಲಿಯೂ ರಾಜ್ಯದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಎಂದು ಐಎಂಡಿ ತಿಳಿಸಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ ಇದೆ ಎಂದು ಮನ್ಸೂಚನೆ ನೀಡಲಾಗಿದೆ.
ಭಾರೀ ಮಳೆಯಿಂದ ತತ್ತರಿಸಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್ ಮತ್ತು ಕಲಬುರ್ಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗಲಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರಿನ ಹಲವೆಡೆ ಮೋಡ ಕವಿದ ವಾತವಾರಣ ಇರಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement