ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮರುಪರಿಗಣಿಸಲು ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.
ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಕ್ರಿಮಿನಲ್‌ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ಭಾಗಶಃ ಎತ್ತಿ ಹಿಡಿದಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ವಿಶೇಷ ತನಿಖಾ ದಳ(ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದ ವಿಚಾರಣೆ ನಡೆಸಿ ಜೂನ್‌ 21ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.

ರಾಜ್ಯಪಾಲರಿಂದ ಅಗತ್ಯ ಪೂರ್ವನುಮತಿ ಪಡೆದಿಲ್ಲ ಎಂದು ಯಡಿಯೂರಪ್ಪ ಮತ್ತು ಇತರರ ವಿರುದ್ದದ ಖಾಸಗಿ ದೂರನ್ನು ವಿಶೇಷ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶವನ್ನು ಹೈಕೋರ್ಟ್ ಬದಿಗೆ ಸರಿಸಿ ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ನ್ಯಾಯಾಲಯವು ಆದೇಶಿಸಿದೆ.
ಯಡಿಯೂರಪ್ಪ, ಪುತ್ರ ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್‌ ಶ್ರೀ, ಚಂದ್ರಕಾಂತ್‌ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌, ಐಎಎಸ್‌ ಅಧಿಕಾರಿ ಡಾ. ಜಿ ಸಿ ಪ್ರಕಾಶ್‌, ಕೆ ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ‌ ಯಮಕನಮರಡಿ ಅವರು ಪ್ರಕರಣದಲ್ಲಿ ಪ್ರತಿವಾದಿಗಳಾಗಿದ್ದಾರೆ.

ಪ್ರಮುಖ ಸುದ್ದಿ :-   ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ರಾಜ್ಯಪಾಲರಿಂದ ಅಗತ್ಯ ಪೂರ್ವಾನುಮತಿ ಪಡೆದಿಲ್ಲ ಎಂದು ಯಡಿಯೂರಪ್ಪ ಮತ್ತು ಇತರರ ವಿರುದ್ದದ ಖಾಸಗಿ ದೂರನ್ನು ವಿಶೇಷ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶವನ್ನು ಹೈಕೋರ್ಟ್ ಬದಿಗೆ ಸರಿಸಿದೆ. ಹಾಗೂ ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಯ ವಿಚಾರವನ್ನು ವಿಶೇಷ ನ್ಯಾಯಾಲಯ ನಿರ್ಧರಿಸಲಿದೆ ಎಂದು ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಹೇಳಿದೆ.

ಯಡಿಯೂರಪ್ಪ ಮತ್ತು ಸೋಮಶೇಖರ್‌ ವಿರುದ್ಧದ ತನಿಖೆಗೆ ಅನುಮತಿ ಕೋರಿ ಅಬ್ರಹಾಂ ಅವರು ರಾಜ್ಯಪಾಲರು ಮತ್ತು ವಿಧಾನಸಭೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದರು. 2021ರ ಜೂನ್‌ 24ರಂದು ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು. ಇದನ್ನು ಆಧರಿಸಿ, 2021ರ ಜುಲೈ 8ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರನ್ನು ವಜಾ ಮಾಡಿತ್ತು. ಹೀಗಾಗಿ, ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

4.3 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement