ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನೇಮಕವಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಎಸ್ .ಆರ್. ಬೊಮ್ಮಾಯಿಯವರ ಪುತ್ರ. ತಂದೆ, ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ರಾಜಕೀಯ ಕುಟುಂಬ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಅಪ್ಪ, ಮಗ ಇಬ್ಬರೂ ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವುದು ರಾಜ್ಯದಲ್ಲಿ ಎರಡನೇ ಬಾರಿಯಾಗಿದೆ. ಇದಕ್ಕೂ ಮೊದಲು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.
ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ ನಂತರ ಇದು ತಂದೆ-ಮಗ ಇಬ್ಬರೂ ಮುಖ್ಯಮಂತ್ರಿಯಾದ ಎರಡನೇ ಕುಟುಂಬವಾಗಿದೆ. ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್.ಆರ್.ಬೊಮ್ಮಾಯಿ 1988-89ರಲ್ಲಿ ಕರ್ನಾಟಕದ ಹದಿಮೂರನೇ ಮುಖ್ಯಮಂತ್ರಿಯಾಗಿದ್ದರು. ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕದಲ್ಲಿ ತಂದೆ-ಮಗ ಮೂಖ್ಯಮಂತ್ರಿಯಾದ ಮೊದಲನೇ ಕುಟುಂಬವಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ