ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. ಈತನಿಗೆ ಉಪನ್ಯಾಸಕ ಮಂಜುನಾಥ ಭಟ್, ಸಹಶಿಕ್ಷಕಿಯರಾದ ವಿದ್ಯಾ ಭಟ್, ಸೀತಾ ಭಟ್ ಮಾರ್ಗದರ್ಶನ ನೀಡಿದ್ದರು. ಪ್ರತಿಭಾವಂತ ವಿದ್ಯಾರ್ಥಿ ಯಾಗಿರುವ ಈತನ ಸಾಧನೆಗೆ ಲಯನ್ಸ್ ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ