ಬಿಜೆಪಿ ಶಾಸಕ ಸುನಿಲಕುಮಾರ ಪೊಲೀಸ್ ವಶಕ್ಕೆ

ಬೆಂಗಳೂರು: ‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲಕುಮಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಂಧನ ಮಾಡಿರುವ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ (BJP) ನಿತ್ಯ ಪ್ರತಿಭಟನೆ ನಡೆಸಲು ಮುಂದಾಗಿದ್ದು ಇಂದು, ಬುಧವಾರ ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲಕುಮಾರ (Sunil Kumar) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್‌ ಹಿಡಿದು ಸುನಿಲಕುಮಾರ ಅವರು ಏಕಾಂಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement