ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ(KFD)ಗೆ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಶಿರಸಿ ತಾಲೂಕಿನ 68 ವರ್ಷದ ವ್ಯಕ್ತಿಯೊಬ್ಬರು ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದೆ.
ಶಿರಸಿ ತಾಲೂಕಿನ ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಫೆ.22ರಂದು‌ ‌ವಾಂತಿ ಜ್ವರ ಕಾಣಿಸಿಕೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ‌ ಮಣಿಪಾಲ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಅವರು ಮೃತರಾಗಿದ್ದಾರೆ ಎಂದು ಹೇಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 47 ಮಂದಿ ಮಂಗನ ಕಾಯಿಲೆಗೆ ತುತ್ತಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಸಿದ್ಧಾಪುರಕ್ಕೆ ಸೀಮಿತವಾಗಿದ್ದ ಮಂಗನ ಕಾಯಿಲೆ ಈಗ ಜಿಲ್ಲೆಯ ಶಿರಸಿ ತಾಲೂಕಿಗೂ ಹಬ್ಬಿದ್ದು, ವ್ಯಕ್ತಿಯ ಸಾವಿಗೂ ಕಾರಣವಾಗಿದೆ. ಕೆಲದಿನಗಳ ಹಿಂದೆ ಈ ಕಾಯಿಲೆಯಿಂದ ಸಿದ್ದಾಪುರ ತಾಲೂಕಿನ ಇಬ್ಬರು ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement