ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಅಸ್ಥಿರ, ವೆಂಟಿಲೇಟರ್ ಅಳವಡಿಕೆ

ಲಕ್ನೋ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರಗೊಂಡಿದ್ದು, ಅವರಿಗೆ ನಾನ್ ಇನ್ವಾಸೀವ್ ವೆಂಟಿಲೇಟರ್ ಅಳವಡಿಸಲಾಗಿದೆ.
ಸಂಜಯ್ ಗಾಂಧಿ ವೈದ್ಯಕೀಯ ಸ್ನಾತಕೋತ್ತರ ಸಂಸ್ಥೆ (ಎಸ್ ಜಿಪಿಜಿಐಎಂಎಸ್) ನಲ್ಲಿ ಕಲ್ಯಾಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಗ್ ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.
ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರವಾಗಿದೆ. ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದೆ.
ಜುಲೈ 4 ರಂದು ಕಿಡ್ನಿ ಸೋಂಕು ಹಾಗೂ ಪ್ರಜ್ಞೆ ತಪ್ಪಿದ್ದರಿಂದ ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅದೃಷ್ಟ ಅಂದ್ರೆ ಇದೇ ಅಲ್ವಾ | ಕೇವಲ 2 ಮೀನುಗಳ ಮಾರಾಟದಿಂದ ಲಕ್ಷಾಧಿಪತಿಯಾದ ಮೀನುಗಾರ..! ಮೀನಿನ ಬೆಲೆ ಕೇಳಿದ್ರೆ ಹೌಹಾರಬೇಕು...!!

ನಿಮ್ಮ ಕಾಮೆಂಟ್ ಬರೆಯಿರಿ

advertisement