ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ಹೊಸಪೇಟೆ : ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ದೇವಸ್ಥಾನಕ್ಕೆ ಭೇಟಿ ನೀಡುವವರು ಬರ್ಮುಡ, ಜೀನ್ಸ್ ಚಡ್ಡಿ ಧರಿಸುವಂತಿಲ್ಲ. ವಿರೂಪಾಕ್ಷನ ದರ್ಶನ‌ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯ. ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಪಂಚೆ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ದೇವಸ್ಥಾನದ ಆವರಣದ ಒಳಗೆ ತುಂಡುಡಿಗೆ ನಿಷೇಧಿಸಲಾಗಿದೆ
ಪ್ರವಾಸಿ ತಾಣವೂ ಆದ ಹಂಪಿಗೆ ಪ್ರತಿನಿತ್ಯವೂ ಸಾವಿರಾರು ಮಂದಿ ವಿದೇಶಗರೂ ಭೇಟಿ ನೀಡುತ್ತಾರೆ. ಅವರು ದೇವಸ್ಥಾನಕ್ಕೆ ತುಂಡು ಉಡುಗೆಯಲ್ಲಿ ಭೇಟಿ ನೀಡುತ್ತಿದ್ದು, ಇ ಇದೀಗ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ.

ದೇವಸ್ಥಾನಕ್ಕೆ ಭೇಟಿ ನೀಡುವ ಪುರುಷರಷ್ಟೇ ಅಲ್ಲದೇ, ತುಂಡು ಉಡುಗೆಯಲ್ಲಿ ಬರುವ ಮಹಿಳೆಯರು ಸಹ ದೇವಸ್ಥಾನದ ಭೇಟಿ ವೇಳೆ ಶಲ್ಯ ತೊಡಬೇಕಾಗಿದೆ. ಪ್ರಸ್ತುತ ದೇವಸ್ಥಾನದ ವತಿಯಿಂದ ತುಂಡು ಉಡುಗೆಯಲ್ಲಿ ಬರುವವರಿಗೆ ವಸ್ತ್ರ ನೀಡಲಾಗುತ್ತಿದ್ದು, ಇದಕ್ಕೆ ಯಾವುದೇ ರೀತಿಯ ಶುಲ್ಕವನ್ನು ಪಡೆಯುತ್ತಿಲ್ಲ. ದೇವರ ದರ್ಶನ ಮಾಡಿದ ಬಳಿಕ ನೀಡಿದ ವಸ್ತ್ರವನ್ನು ಮರಳಿ ಪಡೆಯುವಂತಹ ವ್ಯವಸ್ಥೆ ಮಾಡಲಾಗಿದೆ.
ಪಂಚೆ, ದೋತಿ, ಸೀರೆ ಇಂತಹ ಸಾಂಪ್ರದಾಯಿಕ ಉಡುಗೆ ತೊಟ್ಟು ಬರಬೇಕು ಎಂಬುದು ಆಶಯವಾಗಿದೆ. ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ, ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪ್ರವಾಸಿಗರಿಗೆ ಲುಂಗಿ, ಪಂಚೆ ಉಚಿತ ವಿತರಣೆ ಮಾಡುತ್ತಿದ್ದ ವೇಳೆ ಶಾಸಕ ಗವಿಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement