ಮಹಾರಾಷ್ಟ್ರದಲ್ಲಿ ಶನಿವಾರ 50 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು , ಕಳೆದ 24 ಗಂಟೆಗಳಲ್ಲಿ 49,447 ಹೊಸ ಪ್ರಕರಣ ದಾಖಲಾಗಿದೆ. ಕೊರೊನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ 227 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಶನಿವಾರದ ವರೆಗೆ ಮಹಾರಾಷ್ಟ್ರದಲ್ಲಿ 4,01,172 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದ ಕೋವಿಡ್ -19 ಪರಿಸ್ಥಿತಿ ಆತಂಕಕಾರಿಯಾಗಿದೆ, ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.88 ರಷ್ಟಿದೆ. ಮಹಾರಾಷ್ಟ್ರದಲ್ಲಿ 21,57,135 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದು, 18,994 ಮಂದಿ ವಿವಿಧ ಕಡೆ ಕ್ವಾರಂಟೈನ್ ಆಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ನಿಮ್ಮ ಕಾಮೆಂಟ್ ಬರೆಯಿರಿ

advertisement