ಮುಂದಿನ ಎರಡು ತಿಂಗಳಲ್ಲಿ ರಾಜ್ಯದ ಆರು ಕಡೆ ಬಿಜೆಪಿ ಸಮಾವೇಶ : ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದ ಆರು ಕಡೆ ದೊಡ್ಡ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ ಎಂದರು.

ಪ್ರಧಾನಿ ಮೋದಿಯವರು ಬರುವ ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಪಕ್ಷದ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ವಿವಿಧ ತಂಡಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ಬಗ್ಗೆ ಹಿರಿಯ ನಾಯಕರೊಂದಿಗೆ ಇನ್ನೊಂದು ಸಭೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement