ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಆಂಧ್ರಪ್ರದೇಶ: ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ಅಮರಾವತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸೇರಿದ್ದಾರೆ.
“ಮುಖ್ಯಮಂತ್ರಿ ಕ್ಯಾಂಪ್ ಕಚೇರಿಯಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ, ಅಂಬಟಿ ತಿರುಪತಿ ರಾಯುಡು ಅವರು ವೈಎಸ್‌ಆರ್‌ಸಿಪಿಗೆ ಸೇರ್ಪಡೆಯಾಗಿದ್ದಾರೆ” ಎಂದು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ರೆಡ್ಡಿ ಅವರು ರಾಯುಡು ಕೊರಳಿಗೆ ವೈಎಸ್‌ಆರ್‌ಸಿಪಿ ಶಾಲು ಹಾಕುವ ಮೂಲಕ ಅವರನ್ನು ಸ್ವಾಗತಿಸಿದರು.
ರಾಯುಡು ಅವರು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದರು ಮತ್ತು ಹಲವಾರು ರಾಜ್ಯಗಳ ಪರವಾಗಿ ಆಡಿದ್ದಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಜನಪ್ರಿಯ ಆಟಗಾರರಾಗಿದ್ದರು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಸೇನೆ ಬಗ್ಗೆ ಪಾಕಿಸ್ತಾನಕ್ಕೆ ಚೀನಾ ಲೈವ್‌ ಮಾಹಿತಿ ನೀಡುತ್ತಿತ್ತು ; ಉನ್ನತ ಸೇನಾ ಜನರಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement