ಬಿಜೆಪಿ ಪರಿಷತ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ವಿಜಯೇಂದ್ರಗೆ ನಿರಾಸೆ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್‌ ಟಿಕೆಟ್‌ ದೊರೆತಿದೆ.
ಹಾಲಿ ಪರಿಷತ್‌ ಸದಸ್ಯರಾಗಿರುವ ಲಕ್ಷ್ಮಣ ಸವದಿಗೆ ಮತ್ತೊಂದು ಅವಕಾಶ ನೀಡಿರುವ ಹೈಕಮಾಂಡ್‌, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಚಲವಾದಿ ನಾರಾಯಣ ಸ್ವಾಮಿಗೆ ಟಿಕೆಟ್ ಅಂತಿಮ ಮಾಡಿದೆ. ಮಹಿಳಾ ಕೋಟಾದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್‌, ಹಿಂದುಳಿದ ವರ್ಗ ಕೋಟದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಇದೇ ವೇಳೆ ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಮಾಜಿ ಸಭಾಪತಿ ಬಸವರಾಜ್‌ ಹೊರಟ್ಟಿಗೆ ಟಿಕೆಟ್‌ ನೀಡಲಾಗಿದೆ. ಇತ್ತೀಚೆಗೆ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ಹೊರಟ್ಟಿ ಅವರಿಗೆ ಹೈಕಮಾಂಡ್‌ ನೀಡಿದ ಭರವಸೆಯಂತೆ ಟಿಕೆಟ್‌ ದೊರಕಿದೆ.ವಿಜಯೇಂದ್ರಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ ಆರೋಪಕ್ಕೆ ತುತ್ತಾಗುವ ಆತಂಕದಿಂದ ಬಿಜೆಪಿ ವರಿಷ್ಠರು ಹಿಂದೇಟು ಹಾಕಿದ್ದಾರೆ ಎನ್ನುತ್ತಿವೆ ಮೂಲಗಳು.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement