ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಆರೋಗದಯಲ್ಲಿ ಏರುಪೇರಾದ ಹಿನ್ನೆಲಯಲ್ಲಿ ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ (ICU) ಚಿಕಿತ್ಸೆ ಪಡೆದಿದ್ದಾರೆ.
ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಸೋಮವಾರ ಜಿಲ್ಲೆಗೆ ಆಗಮಿಸಿದ್ದರು. ಪ್ರಚಾರದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಜಮೀರ್‌ ಅವರ ಆರೋಗ್ಯ ಪರೀಕ್ಷಿಸಲಾಗಿದ್ದು, ಇಕೊ, ಇಸಿಜಿ, ರಕ್ತ ಪರೀಕ್ಷೆ ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿದ ವೈದ್ಯರು, ವಿಶ್ರಾಂತಿಗೆ ಸಲಹೆ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು ಎಂದು ವರದಿಯಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ ಪರ ಮತಯಾಚನೆಗೆ ಜಮೀರ್‌ ಅವರು ಸೋಮವಾರ ಜಿಲ್ಲೆಗೆ ಆಗಮಿಸಿದ್ದರು. ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಸಂಜೆ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಸಭೆಗೆ ತೆರಳುವ ಮುನ್ನ ಜಮೀರ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement