ಬೆಂಗಳೂರು : ವಿವೇಕ ನಗರದ ಬಳಿ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಡಿಕ್ಕಿ ಹೊಡೆದಿದ್ದರಿಂದ 37 ವರ್ಷದ ಮಹಿಳೆ ಮತ್ತು ಅವರ ಮಗ ಸಾವಿಗೀಡಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ವಿವೇಕನಗರ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಆಂಧ್ರಪ್ರದೇಶದ ಮೂಲದ, ಆರ್ಮಿ ಪಬ್ಲಿಕ್ ಶಾಲೆಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸಂಗೀತಾ ಮತ್ತು ಅವರ ಮಗ ಪಾರ್ಥ ಎಂದು ಗುರುತಿಸಲಾಗಿದೆ. ತಾನುಕೆಲಸ ಮಾಡುತ್ತಿದ್ದ ಶಾಲೆಗೆ ಮಗನನ್ನ ಸೇರಿಸಿದ್ದ ಸಂಗೀತಾ ಅವರು, 8 ವರ್ಷದ ಮಗನೊಂದಿಗೆ ಬೆಳಗ್ಗೆ 6.30ರ ಸುಮಾರಿಗೆ ಶಾಲೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್ ಅವರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಅವರು ತಕ್ಷಣ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಶೋಕನಗರ ಸಂಚಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನಿಗಾಗಿ ಹುಡುಕಾಟ ಆರಂಭಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ