ಉತ್ತರ ಪ್ರದೇಶ ಜಿಪಂ ಅಧ್ಯಕ್ಷ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಯಾಣ ಯೋಜನೆಗಳು ಕಾರಣ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ 75 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದರಿಂದಾಗಿ ಸಮಾಜವಾದಿ ಪಕ್ಷದ ಮುಕಂಡ ಅಖಿಲೇಶ್ ಯಾದವ್ ಗೆ ಮುಖಭಂಗವಾಗಿದೆ.
22 ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅವಿರೋಧ ಆಯ್ಕೆ ಪೈಕಿ ಬಿಜೆಪಿಯ 21 ಅಭ್ಯರ್ಥಿಗಳು ಆಯ್ಕೆಯಾಗಿದ್ದು ಸಮಾಜವಾದಿ ಪಕ್ಷದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಐತಿಹಾಸಿಕ ಗೆಲುವಿನ ಬಗ್ಗೆ ಯೋಗಿ ಆದಿತ್ಯನಾಥ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಉತ್ತಮ ಆಡಳಿತ, ಪ್ರಧಾನಿ ಮೋದಿ ಅವರ ಕಲ್ಯಾಣ ಯೋಜನೆಗಳು ಹಾಗೂ ಜನರು ಬಿಜೆಪಿಯ ಮೇಲಿಟ್ಟಿರುವ ನಂಬಿಕೆ ಗೆಲುವಿಗೆ ಕಾರಣ ಎಂದು ಟ್ವೀಟ್‌ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement