‌ಕೇಂದ್ರ ಬಜೆಟ್‌-೨೦೨೨: ಎರಡು ಲಕ್ಷ ಅಂಗನವಾಡಿಗಳು ಮೇಲ್ದರ್ಜೆಗೆ

ನವದೆಹಲಿ: ೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಜೊತೆಗೆ ಅಂಗನವಾಡಿಗಳಿಗೆ ಆಡಿಯೋ ಮತ್ತು ವಿಡಿಯೊ ಸೌಲಭ್ಯ ಕೂಡ ನೀಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಅವರು, ೨೦೧೪ರಿಂದ ಜನರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಹೀಗಾಗಿ, ನಾಗರಿಕರನ್ನು ಸಶಕ್ತಗೊಳಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ’ನಾರಿ ಶಕ್ತಿ’ಯ ಪ್ರಾಮುಖ್ಯತೆ ಗುರುತಿಸಿ, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ಮೂರು ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಮಿಷನ್ ಪೋಷಣ್ ೨.೦, ಮಿಷನ್ ವಾತ್ಸಲ್ಯ ಮತ್ತು ಮಿಷನ್ ಶಕ್ತಿಗಳ ಮೂಲಕ ಸಮಗ್ರ ಸೌಲಭ್ಯಗಳನ್ನು ನೀಡಲಾಗುವುದು .ಮಕ್ಕಳಿಗಾಗಿ ಸಕ್ಷಮ ಅಂಗನವಾಡಿ ಎಂಬ ಹೊಸ ಯೋಜನೆ ರೂಪಿಸಲಾಗಿದ್ದು, ೨ ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ತಿಳಿಸಿದರು.
೩.೮ ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ೨೦೨೦-೨೩ರಲ್ಲಿ ೮೦ ಲಕ್ಷ ಮನೆ ನಿರ್ಮಾಣ ಪೂರ್ಣ ಮಾಡಲಾಗುತ್ತದೆ. ಪಿಎಂ ಆವಾಸ್ ಯೋಜನೆಗೆ ೪೮ ಸಾವಿರ ಕೋಟಿ ರೂ. ನೀಡಲಾಗಿದೆ. ಎಸ್ ಸಿ, ಎಸ್ ಟಿ ಮತ್ತು ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ.

ಪ್ರಮುಖ ಸುದ್ದಿ :-   ಜಮ್ಮು-ಕಾಶ್ಮೀರ : ಮೂವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement