ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ (social media) ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಐಶ್ವರ್ಯಾ ಮಹಾದೇವ ಅವರನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಶ್ವರ್ಯಾ ಅವರು ಮಾಜಿ ಶಾಸಕ ದಿವಂಗತ ಮಂಚನಹಳ್ಳಿ ಮಹಾದೇವ ಅವರ ಪುತ್ರಿಯಾಗಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆಆರ್ ನಗರದವರಾದ ಇವರು ಅತಿ ಕಿರಿಯ ವಯಸ್ಸಿನಲ್ಲೇ ಮಹಿಳಾ ಘಟಕದ ಕಾರ್ಯದರ್ಶಿಯಾಗಿದ್ದರು. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಆಗಿದ್ದರು. ವಕೀಲ ಪದವಿ ಪಡೆದಿರುವ ಅವರು ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ