ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಮೊದಲು ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಹುಬ್ಬಳ್ಳಿಯ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲುವೇದಿಕೆಯ ಪಕ್ಕದಲ್ಲೇ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿತ್ತು. ಈ ಕಟೌಟ್ ಗಾಳಿಗೆ ಸಿಲುಕಿ ನಿಯಂತ್ರಣ ತಪ್ಪಿ ಜನರ ಮೇಲೆ ಬಿದ್ದಿದೆ. ಕಟೌಟ್ ಅಡಿಯಲ್ಲಿ ಸಿಲುಕಿ ಮೂವರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಲವು ಸಚಿವರು ಭಾಗವಹಿಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ