ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ ಶೆಟ್ಟಿ , ಇಬ್ಬರು ಕಾರ್ಪೊರೇಟರ್ ಗಳಾದ ಭರತ್ ಮತ್ತು ಸಂದೀಪ್ ಗರೋಡಿ, ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ ಪಂಪ್‌ವೆಲ್‌ ಸೇರಿ ಆರು ಜನರ ಮೇಲೆ ಪ್ರಕರಣ ದಾಖಲಾಗಿದೆ.

ನಗರದ ವೆಲೆನ್ಸಿಯಾ ಸೈಂಟ್ ಜೆರೋಸಾ ಹೈಸ್ಕೂಲ್ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರು ತಮ್ಮ ಶಾಲಾ ವಿದ್ಯಾ,ರ್ಥಿಗಳಿಗೆ ಪಾಠ ಮಾಡುವ ಸಮಯ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಶಾಲಾ ಆಡಳಿತ ಮಂಡಳಿಯ ಜೊತೆ ವಿಚಾರ ವಿಮರ್ಶೆ ಮಾಡದೆ ಫೆ.12ರಂದು ಶಾಸಕರಾದ ಭರತ್ ಶೆಟ್ಟಿ, ಭಜರಂಗದಳ ಮುಖಂಡ ಶರಣ ಪಂಪ್ ವೆಲ್, ಸ್ಥಳೀಯ ಕಾರ್ಪೊರೇಟರ್ ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್ ಅವರ ಜತೆ ಸೇರಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿ ಶಾಲಾ ಗೇಟ್ ಎದುರಲ್ಲಿ ಅಕ್ರಮವಾಗಿ ಸೇರಿ ಜೈ ಶ್ರೀರಾಮ ಎಂಬ ಘೋಷಣೆಗಳನ್ನು ಕೂಗಿದ್ದಾರೆ ಹಾಗೂ ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಮಾತನಾಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಗಲಭೆ ಉಂಟಾಗುವ ರೀತಿಯಲ್ಲಿ ಪ್ರಚೋದಿಸಿ ಮಾತನಾಡಿದ್ದಾರೆ. ಕೋಮು ಸೂಕ್ಷ್ಮವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಬಯಸಿದ್ದಾರೆ’ ಎಂದು ಅನಿಲ್‌ ಲೋಬೊ ಅವರು ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement