ನಿಪ್ಪಾಣಿ : 101 ವರ್ಷಗಳ ಹಳೆಯ ನಿಪ್ಪಾಣಿ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

 ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಪತ್ರ ಬರೆಯಲಾಗಿದೆ.
ನಿಪ್ಪಾಣಿ ಹಳೆ ಪಿಬಿ ರಸ್ತೆಯ ರಾಮಮಂದಿರ ಇದಾಗಿದ್ದು, ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದೆ. ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ.
ಶ್ರೀರಾಮ ಮಂದಿರ 101 ವರ್ಷಗಳ ಇತಿಹಾಸ ಹೊಂದಿದೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯಲ್ಲಿ ಪತ್ತೆಯಾಗಿದೆ. ಎರಡನೇ ಪತ್ರ ಮಂದಿರದ ಆವರಣದ ಹನುಮಾನ ಮಂದಿರದಲ್ಲಿ ಪತ್ತೆಯಾಗಿವೆ. ಈ ಕುರಿತು ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ.

ದೇವಸ್ಥಾನದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು ನೋಡಿ ದೇವಸ್ಥಾನದ ಆಡಳಿತ ಮಂಡಳಿಗೆ ಮೊದಲು ಮಾಹಿತಿ ನೀಡಿದ್ದರು.ಅಲ್ಲಿ ಚರ್ಚೆಯಾಗಿ ನಿಪ್ಪಾಣಿ ನಗರ ಠಾಣೆಗೆ ದೂರು ನೀಡಲಾಗಿದೆ.
ಬೆದರಿಕೆ ಪತ್ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಿಲಾಗಿದೆ. ಒಂದು ಡಿಆರ್ ಪೋಲಿಸ್ ತುಕಡಿಯನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement