ಕರಡಿ ದಾಳಿ: ಮನೆಯ ಮುಂದೆ ಮಲಗಿದ್ದ ವ್ಯಕ್ತಿಗೆ ಗಂಭೀರ ಗಾಯ

ಮಧುಗಿರಿ: ಕರಡಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.
ಮನೆಯ ಮುಂದೆ ಮಲಗಿದ್ದ ಮಲೇರಂಗಪ್ಪ (56) ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ ಮಲೇರಂಗಪ್ಪ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement