ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ಬಿಜೆಪಿ ಸರ್ಕಾರವು ಕೋಮು ದ್ವೇಷವನ್ನು ಬಿತ್ತುತ್ತಿರುವವರ ಮೇಲೆ, ಆಟಾಟೋಪ ಮಾಡುವವರ ಮೇಲೆ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ʼ ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದಲ್ಲಿ ಅವರು ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಬರೆದಿದ್ದಾರೆ.
ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಸದಸ್ಯ ಸ್ಥಾನಕ್ಕೆ ಹೆಚ್‌.ಎಸ್‌.ರಾಘವೇಂದ್ರ ರಾವ್‌, ನಟರಾಜು ಬೂದಾಳು, ಚಂದ್ರಶೇಖರ ನಂಗೇಲಿ ರಾಜೀನಾಮೆ ನೀಡಿದ್ದಾರೆ ಅವರು ಕೂಡ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಅಲ್ಲದೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರಿಗೆ ಕೈ ಬರಹದಲ್ಲಿ ಪತ್ರ ಬರೆದಿರುವ ಎಸ್.ಜಿ.ಸಿದ್ದರಾಮಯ್ಯ ಅವರು, ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣದ ಮೇಲಿನ ಕೋಮುವಾದಿಕರಣವನ್ನು ನೋಡಿದರೆ ಆತಂಕ ಉಂಟಾಗುವಂತಿದೆ ಎಂದು ಹೇಳಿದ್ದಾರೆ.

ಪಠ್ಯಪರಿಷ್ಕರಣೆಯು ಅಸಂವಿಧಾನಿಕ ನಡುವಳಿಕೆಗಳು, ಶೈಕ್ಷಣಿಕ ವಾತಾವರಣದಲ್ಲಿ ಅನಾರೋಗ್ಯಕರ ಬೆಳವಣಿಗೆಗಳಾಗಿವೆ. ಕನ್ನಡದ ಪರಂಪರೆಗೆ ದುಡಿದ ಮಹನೀಯರಿಗೆ, ಕನ್ನಡ ಪರಂಪರೆಗೆ ಧಕ್ಕೆ ಎಸಗುತ್ತಿರುವುದು, ಅಗೌರವ ತೋರಿದ ನಡವಳಿಕೆಯಲ್ಲಿ ಕನ್ನಡ – ಕನ್ನಡಿಗ – ಕರ್ನಾಟಕಕ್ಕೆ ಎಸಗಿದ ದ್ರೋಹಕೃತ್ಯವಾಗಿದೆ ಎಂದು ಹೇಳಿದ್ದಾರೆ.
ಸರ್ಕಾರದ ಕ್ರಮದಿಂದ ನೊಂದಿರುವ ತಾನು ತಮ್ಮ ಒಂದು ಕವಿತೆ “ಮನೆಗೆಲಸದ ಹೆಣ್ಣುಮಗಳು” 9ನೇ ತರಗತಿಯ ದ್ವಿತೀಯ ಭಾಷಾ ಪದ್ಯವಾಗಿ ಸೇರಿದ ತನ್ನ ಕವಿತೆಯನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ. ತಮ್ಮ ಕವಿತೆಯನ್ನು ಪಠ್ಯವಾಗಿ ಬೋಧಿಸಲು ಇದ್ದ ಅನುಮತಿಯನ್ನು ಹಿಂಪಡೆಯುತ್ತಿರುವುದಾಗಿ ಎಸ್.ಜಿ.ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement