ಅಂಕೋಲಾ: ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾಸಗೋಡ ಸೂರ್ವೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಹಮ್ಮಣ್ಣ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿ ಜೈಲುವಾಸ ಅನುಭವಿಸಿರುವ ಅವರನ್ನು ಇತ್ತೀಚೆಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸೇರಿದಂತೆ ನೂರಾರು ಜನರು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಿದ್ದರು. ಕೇಂದ್ರ ಸರ್ಕಾರದಿಂದ ಸಹ ವಿಶೇಷ ಶಾಲು ಅರ್ಪಿಸಿ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿತ್ತು. ವೆಂಕಣ್ಣ ನಾಯಕ್ ಅವರು ಉಪ್ಪಿನ ಸತ್ಯಾಗ್ರಹ, ಕರಬಂಧಿ ಹೋರಾಟ, ಅಸಹಕಾರ ಚಳವಳಿ, ಹುಲ್ಲು ಬನ್ನಿ ಸತ್ಯಾಗ್ರಹಗಳಲ್ಲಿ ಭಾಗವಹಿಸಿದ್ದರು.
ವೆಂಕಣ್ಣ ನಾಯಕ ಅವರ ನಿಧನಕ್ಕೆ ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಹಲವಾರು ಜನ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement