ಹಿಜಾಬ್‌ ವಿವಾದ ಶಿವಮೊಗ್ಗದಲ್ಲಿ ತೀವ್ರ: ಕಾಲೇಜಿನ ಹೊರಭಾಗದಲ್ಲಿ ಕಲ್ಲತೂರಾಟ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಈಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ.

ಮುಂಜಾಗ್ರತಾ ಕ್ರಮವಾಗಿ  144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರಿಸ್ಥಿತಿ ಮಿತಿ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದಾರೆ. ಎಸ್ ಪಿ ಲಕ್ಷ್ಮಿಪ್ರಸಾದ್‌ ಖುದ್ದು ಲಾಠಿ ಹಿಡಿದು ಅಖಾಡಕ್ಕೆ ಇಳಿದಿದ್ದಾರೆ.

ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆಗೆ ಇಳಿದಿದ್ದರು. ಸ್ಥಳಕ್ಕೆ ಆಗಮಿಸಿದಂತ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದರು. ಕಾಲೇಜಿನ ಆವರಣದಲ್ಲಿದ್ದ ಧ್ವಜ ಕಂಬವೇರಿ ಕೇಸರಿ ಧ್ವಜವನ್ನು ಹಾರಿಸಿದ್ದರು.

ಶಿವಮೊಗ್ಗದ ಬಹುತೇಕ ಕಾಲೇಜುಗಳಲ್ಲಿ ಹಿಜಬ್, ಕೇಸರಿ ಶಾಲು ವಿವಾದ ಭುಗಿಲೆದಿದೆ. ಸಹ್ಯಾದ್ರಿ ಕಾಲೇಜ್, ಸರಕಾರಿ ಪದವಿ ಕಾಲೇಜ್ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದಾರೆ.
ನ್ಯಾಷನಲ್ ಕಾಲೇಜು ಆವರಣದ ಎಚ್ ಎಸ್ ರುದ್ರಪ್ಪ ಕಾಲೇಜು ಬಳಿಯೂ ಕಲ್ಲುತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.
ಬಾಪೂಜಿ ನಗರ ಕಾಲೇಜಿನಿಂದ ಬಿ.ಹೆಚ್. ರಸ್ತೆಯ ಮೂಲಕ ಮೆರವಣಿಗೆ ನಡೆಸಲು ಮುಂದಾದ ಗುಂಪಿಗೆ ಎಸ್ಪಿ ಲಕ್ಷ್ಮಿ ಪ್ರಸಾದ್ ರವರು ಮೆರವಣಿಗೆ ನಡೆಸುವುದು ಬೇಡ ಎಂದು ಹೇಳಿದ್ದಾರೆ. ಕೇಳದೆ ಹೋದಾಗ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಇದರಿಂದ ಅರ್ಧ ಜನ ಓಡಿ ಹೋದರು.
ಇಷ್ಟಾದರೂ ಸಹ ವಿದ್ಯಾರ್ಥಿನಿಯರು ನಮಗೆ ನ್ಯಾಯಬೇಕು ಎಂದು ಮೆರವಣಿಗೆ ಹೊರಟರು. ರಸ್ತೆಯ ಇನ್ನೂಂದು ಕಡೆ ಕೇಸರಿ ಬಾವುಟ ಹಿಡಿದ ವಿದ್ಯಾರ್ಥಿಗಳು ಅದೇ ರಸ್ತೆಗೆ ಬಂದರು. ಈ ವೇಳೆ ಪೊಲೀಸರು ಎರಡು ಕಡೆಯವರನ್ನು ಬೇರೆ ಬೇರೆ ರಸ್ತೆಯ ಕಡೆ ತಿರುಗಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ, ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement